ಸಾಹಿತ್ಯದ ಓದಿನಿಂದ ಮಾನವೀಯತೆ ಗಟ್ಟಿಗೊಳಿಸಿ














ವಾಲ್ಮೀಕಿ ಬರೆದ ರಾಮಾಯಣ ಮಹಾ ಕಾವ್ಯದ ಓದಿನ ಮೂಲಕ ಜೀವನ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾನವೀಯತೆ ಗಟ್ಟಿಗೊಳಿಸಲು ಸಾಧ್ಯ ಎಂದು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಹೇಳಿದರು.
ಅವರು ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಸಹಯೋಗದಲ್ಲಿ ಜ್ಞಾನದೀಪ ಸಂಸ್ಥೆಯಲ್ಲಿ ನಡೆದ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ವಾಲ್ಮೀಕಿ ಜಯಂತಿಯ ಮಹತ್ವದ ಬಗ್ಗೆ ಮಾತನಾಡಿದರು. ಇಂಟರ್ಯಾಕ್ಟ್ ಕ್ಲಬ್ ನ ಜಿಲ್ಲಾ ಸಂಯೋಜಕ ಶಶಿಧರ್ ಬಿ ಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ನ ಪೂರ್ವಧ್ಯಕ್ಷ ವಿನಯ್ ಕುಮಾರ್ ಕೆ ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷ ರವೀಂದ್ರ ಗೌಡ, ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ರೋಶನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಶಿಕ್ಷಕಿ ಸಿಂಚನ ಕೆ ಪಿ ಸ್ವಾಗತಿಸಿ, ಲೋಕೇಶ್ ಎಂ ವಂದಿಸಿದರು. ಉಪನ್ಯಾಸಕ ಯೋಗೀಶ್ ತಳೂರು ಕಾರ್ಯಕ್ರಮ ನಿರ್ವಹಿಸಿದರು.







