ಸುಬ್ರಹ್ಮಣ್ಯ ಕುಮಾರಸ್ವಾಮಿ ಪಿಯು ಕಾಲೇಜಿನ ಮೂವರು ವಿದ್ಯಾರ್ಥಿಗಳು ಅಥ್ಲೆಟಿಕ್ಸ್‌ನಲ್ಲಿ ಜಿಲ್ಲಾ ಮಟ್ಟಕ್ಕೆಆಯ್ಕೆ

0

: ರಾಮಕುಂಜದ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜು, ಸುಬ್ರಹ್ಮಣ್ಯದ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದಿದ್ದಾರೆ.
ಕಾಲೇಜಿನ ವಿದ್ಯಾರ್ಥಿನಿ ನಂದಿತಾ ಕೆ.ವಿ. ಅವರು ಚಕ್ರ ಎಸೆತ Discus Throw), ಜಸ್ವಿನ್ ಎಲ್. ಅವರು ನಡಿಗೆ ಸ್ಪರ್ಧೆ (Walk Race) ಹಾಗೂ ಭಗತ್ ಟಿ. ಅವರು ಈಟಿ ಎಸೆತ (Javelin Throw) ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗಳು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆಯಲಿವೆ.