













ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಗಾಂಧಿನಗರ–ಗುರುಂಪು ಅಲೆಟ್ಟಿ ರಸ್ತೆಯಲ್ಲಿ ಪೈಪ್ಲೈನ್ ಕಾಮಗಾರಿಯಿಂದ ರಸ್ತೆ ಹಾನಿಗೊಳಗಾಗಿದೆ. ಈಗಾಗಲೇ ಅಲೆಟ್ಟಿ ಸೇತುವೆಯ ದುರಸ್ತಿ ಕಾಮಗಾರಿ ನಡೆಯುತ್ತಿರುವ ಕಾರಣ ಈ ರಸ್ತೆಯಲ್ಲಿ ದೊಡ್ಡ ವಾಹನಗಳ ಸಂಚಾರಕ್ಕೂ ನಿರ್ಬಂಧ ಉಂಟಾಗಿದೆ ಆದ್ದರಿಂದ ಈ ರಸ್ತೆಯನ್ನು ಈಗಲೇ ಸರಿಪಡಿಸುವಂತೆ ಸುಳ್ಯ ನ.ಪಂ. ಮಾಜಿ ಸದಸ್ಯ ರಿಯಾಜ್ ಕಟ್ಟೆಕಾರ್ ರವರು ನ.ಪಂ. ಅಧಿಕಾರಿಗಳನ್ನು ಮನವಿ ಮಾಡಿದ್ದಾರೆ.

ರಸ್ತೆ ದುರಸ್ತಿಯಾಗದೇ ಸಾರ್ವಜನಿಕರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ನ.ಪಂ. ಅಧಿಕಾರಿಗಳು ಕೂಡಲೇ ಗಮನಹರಿಸಿ, ಪೈಪ್ಲೈನ್ ಕಾಮಗಾರಿಯಿಂದ ಹಾನಿಗೊಳಗಾದ ರಸ್ತೆಯನ್ನು ಶೀಘ್ರವಾಗಿ ದುರಸ್ತಿ ಪಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಅವರು ವಿನಂತಿಸಿದ್ದಾರೆ.







