ಎಡಮಂಗಲ : ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿ ಕಾಸರಗೋಡಿನಲ್ಲಿ ಪತ್ತೆ

0

ಎಡಮಂಗಲ ಪೊಯ್ಯತ್ತೂರು ನಿವಾಸಿ ನಾರಾಯಣ ಪೂಜಾರಿ ಎಂಬವರ ಪುತ್ರ ಪುತ್ತೂರು ಕೊಂಬೆಟ್ಟು ಜೂನಿಯರ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಶ್ರೀವತ್ಸ ಎಂಬವರು ಅ.22 ರಂದು ನಾಪತ್ತೆಯಾಗಿದ್ದು ಅವರು ಕಾಸರಗೋಡಿನ ಹೊಸಂಗಡಿಯ ಹೋಟೆಲೊಂದರಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಬೆಳ್ಳಾರೆ ಪೊಲೀಸರು ಹೊಸಂಗಡಿಯಿಂದ ವಿದ್ಯಾರ್ಥಿಯನ್ನು ಪತ್ತೆಹಚ್ಚಿ ಪೊಲೀಸು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.
ನಾಪತ್ತೆಯಾಗಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ವಿದ್ಯಾರ್ಥಿಯ ತಂದೆ ದೂರು ನೀಡಿದ್ದರು.