Breaking News

ತೆಕ್ಕಿಲ್ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

Advt_Headding_Middle
Advt_Headding_Middle

ಅರಂತೋಡು ತೆಕ್ಕಿಲ್ ಆಂಗ್ಲಮಾಧ್ಯಮ ಪ್ರೌಢಶಾಲಾ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಜೂ.12ರಂದು ಗೂನಡ್ಕ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ವಹಿಸಿದ್ದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಯು.ಕೆ.ತೀರ್ಥರಾಮ ಉದ್ಘಾಟಿಸಿದರು. ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯ ದಾಮೋದರ ಕೆ., ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹರಿಣಾಕ್ಷಿ ಕೆ.ಎಸ್. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಎಸ್.ಎಸ್.ಎಲ್.ಸಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಕೊಟ್ಟ ಎಲ್ಲಾ ವಿದ್ಯಾರ್ಥಿ ಗಳನ್ನು ಸ್ಮರಣಿಯನ್ನು ನೀಡಿ ಅಭಿನಂದಿಸಲಾಯಿತು. ಶಿಕ್ಷಕಿ ಶ್ರೀಮತಿ ವಿಷಾಲತಾ ಸ್ವಾಗತಿಸಿ, ಶ್ರೀಮತಿ ವಾಣಿ ವಂದಿಸಿದರು. ಸಹಶಿಕ್ಷಕಿ ಕು|ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು

thekkil high school nalli sslc studentge abinandane.jpg

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.