ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಆ.30ರಂದು ಸುಳ್ಯದಲ್ಲಿ ನಡೆಯಲಿರುವ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಪೂರ್ವಭಾವಿ ಸಭೆ

0

 

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜಾಲ್ಸೂರಿನಿಂದ ಸುಳ್ಯದ ವರೆಗೆ ಆಗಸ್ಟ್ 30 ರಂದು ನಡೆಯಲಿರುವ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕರಿಕ್ಕಳ ಮಹೇಶ್ ಕುಮಾರ್ ರವರ ಮನೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾಮರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬ್ಲಾಕ್ ಉಪಾಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು. ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಬ್ದುಲ್ ಗಫೂರ್ ರವರು ಸ್ವಾಗತಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರುಗಳಾದ ಭರತ್ ಮುಂಡೋಡಿ, ಎಂ.ವೆಂಕಪ್ಪ ಗೌಡ, ಕೆ ಪಿ ಸಿ ಸಿ ಸಂಯೋಜಕರಾದ ಕೃಷ್ಣಪ್ಪರವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಎಪ್ಪತ್ತೈದು ವರ್ಷ ದಾಟಿದ ಹಿರಿಯ ಕಾಂಗ್ರೆಸ್ಸ್ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಇಸ್ಮಾಯಿಲ್ ಪಡ್ಪಿನಂಗಡಿ, ಸುಳ್ಯ ಬ್ಲಾಕ್ ಎನ್ ಎಸ್ ಯು ಐ ಅಧ್ಯಕ್ಷರಾದ ಕೀರ್ತನ್ ಕೊಡಪಾಲ, ಕಲ್ಮಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್ ಆಕ್ರಿಕಟ್ಟೆ, ಪಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಲಕ್ಷ್ಮಣ ಗೌಡ ಬೊಳ್ಳಾಜೆ, ಕಲ್ಮಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಧರ್ಮಣ್ಣ ನ್ಯಾಕ್, ಎಂ ಕೆ ಹನೀಫ್, ರಜತ್ ಭಟ್ ಪಂಜದಬೀಡು, ದಿನೇಶ್ ಪುಂಡಿಮನೆ, ಆದಂಕುಂಞಿ ಅಡಿಬಾಯಿ, ಮಹಮ್ಮದ್ ನೇಮನಕಜೆ ಮೊದಲಾದವರು ಉಪಸ್ಥಿತರಿದ್ದರು.