ಮಡಪ್ಪಾಡಿ:ಶ್ರೀ ಉಳ್ಳಾಕುಲು ದೈವಸ್ಥಾನದ ವಠಾರ ಸ್ವಚ್ಛತಾ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಮಡಪ್ಪಾಡಿ, ಶ್ರೀ ಉಳ್ಳಾಕುಲು ದೈವಸ್ಥಾನ ಆಡಳಿತ ಸಮಿತಿ ಮಡಪ್ಪಾಡಿ, ಗ್ರಾಮ ಪಂಚಾಯತ್ ಮಡಪ್ಪಾಡಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಡಪ್ಪಾಡಿ ಮತ್ತು ಊರವರ ಸಹಕಾರದೊಂದಿಗೆ ಶ್ರೀ ಉಳ್ಳಾಕುಲು ದೈವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಜ.13 ರಂದು ನಡೆಸಲಾಯಿತು.

ಈ ಕಾರ್ಯಕ್ರಮವನ್ನು ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿರವರು ದೀಪ ಬೆಳಗಿಸುವ ಮುಖೇನ ಚಾಲನೆಯನ್ನು ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕಿನ ಯೋಜನಾಧಿಕಾರಿಯವರಾದ ನಾಗೇಶ್ ಪಿ ರವರು ಮಾಹಿತಿ ಮಾರ್ಗದರ್ಶನ ನೀಡಿದರು.


ಈ ಕಾರ್ಯಕ್ರಮದಲ್ಲಿ ದೈವಸ್ಥಾನ ಆಡಳಿತ ಸಮಿತಿಯ ಕಾರ್ಯದರ್ಶಿಗಳಾದ ಸೋಮಶೇಖರ ಕೇವಳರವರು, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ ರವರು, ಸೇವಾಪ್ರತಿನಿಧಿಯವರಾದ ಶ್ರೀಮತಿ ಸೌಮ್ಯರವರು, ಒಕ್ಕೂಟದ ಅಧ್ಯಕ್ಷರಾದ ಹರಿಪ್ರಸಾದ್ ರವರು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಒಕ್ಕೂಟದ ಸದಸ್ಯರು, ಊರವರು ದೈವಸ್ಥಾನದ ವಠಾರಗಳನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಮಾಡಿದರು.