ಎ.10,11 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ, ಚಂಡಿಕಾ ಹೋಮ,108 ನಾಳಿಕೇರ ಗಣಪತಿ ಹವನ,ಮೂಡಪ್ಪ ಸೇವೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ,ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ,ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.10 ಮತ್ತು ಎ.11 ರಂದು ನಡೆಯಲಿದೆ.
ಎ.10 ರಂದು ಸೋಮವಾರ ರಾತ್ರಿ ಗಂಟೆ 7.00 ಕ್ಕೆ ದೇವತಾ ಪ್ರಾರ್ಥನೆ,ಆಚಾರ್ಯವರಣ,ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ,ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಪೂಜಾ ಬಲಿ, ಮಹಾಪೂಜೆ,ಗಣಪತಿ ದೇವರಿಗೆ ಮೂಡಪ್ಪ ಸೇವೆ ಮತ್ತು ರಂಗಪೂಜೆ ,ಪ್ರಸಾದ ವಿತರಣೆ ನಡೆಯಲಿದೆ.
ಎ.11 ರಂದು ಮಂಗಳವಾರ ಬೆಳಿಗ್ಗೆ ಗಂಟೆ 7.30 ರಿಂದ 108 ತೆಂಗಿನಕಾಯಿ ಮಹಾಗಣಪತಿ ಹೋಮ, ಚಂಡಿಕಾಹೋಮ, ಶ್ರೀ ಸತ್ಯನಾರಾಯಣ ಪೂಜೆ,ಬಿಂಬ ಶುದ್ಧಿ,ಪಂಚವಿಂಶತಿ ಕಲಶ ಪೂಜೆ ನಡೆಯಲಿದೆ.ಬೆಳಿಗ್ಗೆ ಗಂಟೆ 11.00 ಕ್ಕೆ ಹೋಮದ ಪೂರ್ಣಾಹುತಿ,ಸುವಾಸಿನಿ ಪೂಜೆ ಮಧ್ಯಾಹ್ನ ಶ್ರೀ ದೇವರಿಗೆ ಪಂಚಾಮೃತಾಭಿಷೇಕ,ಪಂಚವಿಂಶತಿ ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಲಿದೆ.
ಎ.11 ರಂದು ಸಂಜೆ ಗಂಟೆ 5.00 ಕ್ಕೆ ಪೆರುವಾಜೆ ದೇವಸ್ಥಾನದ ಬಳಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರ ಸಹಕಾರದೊಂದಿಗೆ ಶ್ರೀಮತಿ ಇಂದಿರಾ ರೈ ಪೆರುವಾಜೆ ಹಾಗೂ ಮನೆಯವರಿಂದ ಭಕ್ತಿಪೂರ್ವಕವಾಗಿ ಸಮರ್ಪಿಸುವ ಯಕ್ಷಗಾನ ಬಯಲಾಟ ಶ್ರೀ ದೇವಿ ಮಹಾತ್ಮೆ ನಡೆಯಲಿದೆ.