ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೈವಲ್ಯ ಮಠದ ಶ್ರೀ ಶಿವಾನಂದ ಸರಸ್ವತಿ ಸ್ವಾಮಿ ಮಹಾರಾಜ್ ಭೇಟಿ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮೇ.12 ರ ಸಂಜೆ ಕೈವಲ್ಯ ಮಠದ ಶ್ರೀ ಮದ್ ಶಿವಾನಂದ ಸರಸ್ವತಿ ಸ್ವಾಮಿ ಮಹಾರಾಜ್ ಅವರು ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು. ಶ್ರೀ ದೇವರ ದರುಶನ ಪಡೆದ ಶ್ವಾಮೀಜಿಗಳಿಗೆ ಶ್ರೀ ದೇವಳದ ಅರ್ಚಕರು ಶಾಲು ಹೊದಿಸಿ ಮಹಾಪ್ರಸಾದ ನೀಡಿದರು.ಬಳಿಕ ಅವರು ಬಳಿಕ ಶ್ರೀ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.


ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾನಾ ಸಮಿತಿ ಅಧ್ಯಕ್ಷ ಮೋಹನರಾಂ.ಎಸ್.ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ,ವನಜಾ.ವಿ.ಭಟ್, ಶೋಭಾ ಗಿರಿಧರ್, ಲೋಕೇಶ್ ಮುಂಡೋಕಜೆ, ಶಿಷ್ಠಾಚಾರ ಅಧಿಕಾರಿ ಜಯರಾಮ ರಾವ್, ಶಿಷ್ಠಾಚಾರ ವಿಭಾಗದ ಕೆ.ಎಂ.ಗೋಪಿನಾಥ್ ನಂಬೀಶನ್,ಪ್ರಮುಖರಾದ ಸರ್ವೋತ್ತಮ ಕಾಮತ್, ಹರೀಶ್ ಕಾಮತ್, ಮಾಧವ ನಾಯಕ್, ಗಿರಿಪ್ರಸಾದ್ ಪೈ, ಆಶಾ.ವಿ.ಶೆಣೈ, ಗಿರಿಧರ್ ನಾಯಕ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.