ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯಾಗಬೇಕಾದರೆ ಸುಳ್ಯದಲ್ಲೂ ಕಾಂಗ್ರೆಸ್ ಶಾಸಕರು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಪ್ರತೀ ಗ್ರಾಮ ಮಟ್ಟದಲ್ಲೂ ನಮ್ಮ ಪಕ್ಷದ ನಾಯಕರುಗಳು ಮತ್ತು ಕಾರ್ಯಕರ್ತರು ಉತ್ತಮವಾಗಿ ಪ್ರಚಾರ ಸಮಿತಿಯ ನೇತೃತ್ವದಲ್ಲಿ ಪ್ರಚಾರ ಕಾರ್ಯ ನಡೆಸಿದ್ದರು ಆದರೆ ಅಷ್ಟು ಪರಿಣಾಮಕಾರಿ ಫಲ ನೀಡಿಲ್ಲ.
ಇಂದಿನ ಜನಾಭಿಪ್ರಾಯವನ್ನು ಗೌರವದಿಂದ ನಾವು ಸ್ವೀಕರಿಸುತ್ತೇವೆ. ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು ನಮ್ಮ ಪಕ್ಷ ಚುನಾವಣಾ ಪ್ರಚಾರ ಸಂದರ್ಭದಲ್ಲಿ ನೀಡಿದ ವಚನವನ್ನು ಪಾಲಿಸಲು ಬದ್ದವಾಗಿದ್ದು ಸುಳ್ಯ ಕ್ಷೇತ್ರದ ಅಭಿವೃದ್ಧಿ ಮತ್ತು ಜನಪರ ಯೋಜನೆಗಳ ಜೊತೆಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿಯನ್ನು ಪಕ್ಷ ಬೇಧ ಜಾತಿ ಧರ್ಮ ನೋಡದೆ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಖಂಡಿತ ನಮ್ಮ ಪಕ್ಷದ ಕಾರ್ಯಕರ್ತರು ಶ್ರಮಿಸಲಿದ್ದಾರೆ.
ಸುಳ್ಯ ಕ್ಷೇತ್ರದ ಪ್ರತಿನಿಧಿಯಾಗಿ ಆಯ್ಕೆಯಾದ ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿಯ ಜೊತೆಗೆ ಶಾಂತಿ ಸೌಹಾರ್ದತೆಗೆ ಹೆಚ್ಚು ಒತ್ತು ನೀಡಿ ಸಾಮರಸ್ಯದ ಬದುಕಿಗೆ ಶ್ರಮಿಸುವುದರೊಂದಿಗೆ ನೆನೆಗುದಿಗೆ ಬಿದ್ದಿರುವ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸರ್ಕಾರದೊಂದಿಗೆ ಸಕಾರಾತ್ಮಕವಾಗಿ ಸ್ಪಂದಿಸಲಿ ಎಂದು ಆಶಿಸುತ್ತೇನೆ ಮತ್ತು ನಮ್ಮ ಅಭ್ಯರ್ಥಿ ಜಿ ಕ್ರಷ್ಣಪ್ಪರವರು ಹಾಗೂ ಪಕ್ಷದ ನಾಯಕರು,ಕಾರ್ಯಕರ್ತರನ್ನು ಜೊತೆಗೂಡಿಸಿಕೊಂಡು ಸರಕಾರದ ಜನಪರ ಯೋಜನೆ ಅರ್ಹರಿಗೆ ತಲುಪಿಸುವ ಜವಾಬ್ದಾರಿಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಪಕ್ಷ ವಹಿಸುತ್ತದೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ ಪತ್ರಿಕೆಗೆ ತಿಳಿಸಿದ್ದಾರೆ.