ಮೇ.16:ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

0

ಸುಳ್ಯ ವಿಧಾನ ಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ರವರ ಗೆಲುವಿನ ಹಿನ್ನೆಲೆಯಲ್ಲಿ ಮೇ.16 ರಂದು ಸುಳ್ಯ ಕೇರ್ಪಳ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭವು ನಡೆಯಲಿರುವುದು.

ಪಕ್ಷದ ಕಾರ್ಯಕರ್ತರಿಗೆ, ಬೂತ್ ಮಟ್ಟದ ಕಾರ್ಯಕರ್ತರು, ಬೂತ್ ಮಟ್ಟದ ಪೇಜ್ ಪ್ರಮುಖರು, ಬೂತ್ ಏಜೆಂಟರು,ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ, ಮಂಡಲದ ಸದಸ್ಯರು, ಜಿಲ್ಲೆ ಹಾಗೂ ತಾಲೂಕಿನ ಹಿರಿಯ ಕಿರಿಯ ಕಾರ್ಯಕರ್ತರು ಈ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಮಂಡಲ ಹಾಗೂ ಚುನಾವಣಾ ನಿರ್ವಹಣಾ ಸಮಿತಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.