ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿಯ ರಾಜಾರಾಮ ಕಾಂಪ್ಲೆಕ್ಸ್ ನಲ್ಲಿ ವ್ಯವಹರಿಸುತ್ತಿರುವ
ಪರಿವಾರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಶಾಖೆಯಲ್ಲಿ ಮೇ.24 ರಿಂದ ಇ-ಸ್ಟ್ಯಾಂಪಿಂಗ್ ಸೇವಾ ಕೇಂದ್ರವು ಆರಂಭವಾಗಲಿರುವುದು. ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಭವಾನಿಶಂಕರ್ ಸೇವಾ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯೂನಿಯನ್ ಬ್ಯಾಂಕಿನ ಹಿರಿಯ ಶಾಖಾ ವ್ಯವಸ್ಥಾಪಕ ಅಜಯ್ ಕುಮಾರ್ ಟಿ.ಕೆ ಉಪಸ್ಥಿತರಿರುವರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು ಹಾಗೂ ನಿರ್ದೇಶಕರು, ಶಾಖೆಯ ಸಲಹಾ ಸಮಿತಿ ಸದಸ್ಯರು ಭಾಗವಹಿಸಲಿದ್ದಾರೆ. ಗ್ರಾಹಕರ ಅನೂಕೂಲತೆಗೋಸ್ಕರ ಠಸ್ಸೆ ಪೇಪರ್ ಶಾಖೆಯಲ್ಲಿ ದೊರಕಿಸುವ ಉದ್ದೇಶದಿಂದ ಸೇವಾ ಕೇಂದ್ರ ತೆರೆಯುವುದಾಗಿ ಸಿ.ಇ.ಒ.ತಿಳಿಸಿದರು.