ಜಾಲ್ಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಕಾರು ನರೇಗಾ ಕಾಮಗಾರಿ ಸ್ಥಳದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೂಲಿಗಾರರ ಆರೋಗ್ಯ ತಪಾಸಣೆಗಾಗಿ ಗ್ರಾಮ ಆರೋಗ್ಯ ಕಾರ್ಯಕ್ರಮವು ಮೇ.24ರಂದು ನಡೆಯಿತು.
ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ತಾಲೂಕು ಆರೋಗ್ಯಾಧಿಕಾರಿಗಳು ಭಾಗವಹಿಸಿ ಆರೋಗ್ಯದ ಕುರಿತು ಮಾಹಿತಿ ನೀಡಿದರು.
ಜಾಲ್ಸೂರು ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ ಅವರು ಅಧ್ಯಕ್ಷತೆಯನ್ನು ವಹಿಸಿದರು. ಜಾಲ್ಸೂರು ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವೇದಾ ಶೆಟ್ಟಿ, ತಾಲೂಕು ಎನ್. ಆರ್. ಎಲ್. ಎಂ. ವ್ಯವಸ್ಥಾಪಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಗ್ರಾ.ಪಂ ಕಾರ್ಯದರ್ಶಿ, GAAA TC, TIEC, ಗ್ರಾಮ ಪಂಚಾಯತ್ ಸಿಬ್ಬಂದಿವರ್ಗದವರು ಮತ್ತು ನರೇಗಾ ಕೂಲಿಕಾರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.