ಬಳ್ಪ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಆರೋಗ್ಯ ತಪಾಸಣಾ ಶಿಬಿರ ಮೇ. 26ರಂದು ನಡೆಯಿತು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಫಲಾನುಭವಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು. ಶಿಬಿರದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.