Home Uncategorized ಕಲ್ಮಡ್ಕ : ಗ್ರಂಥಾಲಯದಲ್ಲಿ ಮಕ್ಕಳ ಬೇಸಿಗೆ ಶಿಬಿರ

ಕಲ್ಮಡ್ಕ : ಗ್ರಂಥಾಲಯದಲ್ಲಿ ಮಕ್ಕಳ ಬೇಸಿಗೆ ಶಿಬಿರ

0

ಕಲ್ಮಡ್ಕ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಮೇ.20 ರಂದು ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಆರಂಭಗೊಂಡಿತು. ಭಾಗವಹಿಸಿದ ವಿದ್ಯಾರ್ಥಿಗಳು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು . ಸಂಪನ್ಮೂಲ ವ್ಯಕ್ತಿಗಳಾಗಿ ಚೊಕ್ಕಾಡಿ ಪ್ರೌಢಶಾಲೆಯ ವಿಶ್ರಾಂತ ಮುಖ್ಯ ಶಿಕ್ಷಕರಾದ ಸುಬ್ರಾಯ ಭಟ್ ಓಣಿಯಡ್ಕ , ರೋಟರಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ಕಲ್ಮಡ್ಕ, ತೀರ್ಥಾನಂದ ಕಲ್ಮಡ್ಕ, ಭಾಗವಹಿಸಿದರು.

ಪ್ರಾಥಮಿಕ ಆರೋಗ್ಯ ಅಧಿಕಾರಿ ಶ್ರೀಮತಿ ಪವಿತ್ರ, ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಯಮುನಾ ಹಾಗೂ ಶ್ರೀಮತಿ ವಾರಿಜ ಭೇಟಿ ನೀಡಿ ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಕಲ್ಮಡ್ಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಜ್ರಾಕ್ಷಿ ಶ್ರೀಕಾಂತ್ ಅಭಿನಯ ಗೀತೆ ಹೇಳಿ ಕೊಟ್ಟರು.

ಗ್ರಾಮ ಪಂಚಾಯತ್ ಕಾರ್ಯದರ್ಶಿಯವರಾದ ಗೋಪಾಲಕೃಷ್ಣ ಉಪಸ್ಥಿತರಿದ್ದು ಮಕ್ಕಳಿಗೆ ಶುಭ ಹಾರೈಸಿದರು. ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್ ಭೇಟಿ ನೀಡಿದರು. ಗ್ರಂಥ ಪಾಲಕಿ ಶ್ರೀಮತಿ ಜಯ ಸಂಘಟಿಸಿದರು.

NO COMMENTS

error: Content is protected !!
Breaking