ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರನ್ನು ಮಾನವೀಯತೆ ಆಧಾರದಲ್ಲಿ ಮರು ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಈ ಕುರಿತಂತೆ ಟ್ವೀಟರ್ ಹಾಗೂ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ.