ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ವತಿಯಿಂದ 2022-23ನೇ ಸಾಲಿನ ವೃತ್ತಿಪರ ಕುಶಲ ಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣಗಳ ವಿತರಣಾ ಕಾರ್ಯಕ್ರಮ ಸುಳ್ಯ ತಾಲೂಕು ಪಂಚಾಯತ್‌ನಲ್ಲಿ ಮೇ. 31 ರಂದು ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಫಲಾನುಭವಿಗಳಿಗೆ ಉಪಕರಣಗಳನ್ನು ವಿತರಿಸಿದರು.
ಗಾರೆ 17, ಬಡಗಿ 14, ಹೊಲಿಗೆ ಯಂತ್ರ 25, ಇಲೆಕ್ಟ್ರಿಕಲ್ 4, ಕಮ್ಮಾರಿಕೆ 4, ಆಟೋಮೊಬೈಲ್ 3 ಹೀಗೆ ಒಟ್ಟು 67 ಫಲಾನುಭವಿಗಳಿಗೆ ಸುಧಾರಿತ ಉಪಕರಣಗಳನ್ನು
ವಿತರಿಸಲಾಯಿತು.
ಇದೇ ಸಂದರ್ಭ 2022-23 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ಬಂಧಿತ ಅನುದಾನದಲ್ಲಿ 5 ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.
ಸುಳ್ಯ ತಹಶಿಲ್ದಾರ್ ಜಿ.ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ, ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ಹೆಗ್ಡೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಪ್ರಮುಖರಾದ ಸುಬೋದ್ ಶೆಟ್ಟಿ ಮೇನಾಲ ಮತ್ತಿತರರು ಉಪಸ್ಥಿತರಿದ್ದರು.