ಸುಳ್ಯ ನಗರದ ಗಾಂಧಿನಗರ ಕೆಪಿಎಸ್ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಭಾ ಕಾರ್ಯಕ್ರಮಕ್ಕೆ ಮೊದಲು ಬ್ಯಾಂಡ್ ಸೆಟ್ ಮೂಲಕ ಶಾಲಾ ಮಕ್ಕಳಿಂದ ಮೆರವಣಿಗೆ ನಡೆಯಿತು.2022-23 ನೇ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳು ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಕ್ಲಾಸ್ ತರಗತಿಯನ್ನು ಕೆಪಿಎಸ್ ಕಮಿಟಿಯ ಉಪಾಧ್ಯಕ್ಷ ಚಿದಾನಂದ ಕಾಯರ್ತೋಡಿ ಉದ್ಘಾಟಿಸಿದರು.
ನಂತರ ನಡೆದ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕೆಪಿಎಸ್ ಕಮಿಟಿಯ ಉಪಾಧ್ಯಕ್ಷ ಚಿದಾನಂದ ಕಾಯರ್ತೋಡಿ
ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲ ಅಬ್ದುಲ್ ಅಬ್ದುಲ್ ಸಮದ್, ಉಪ ಪ್ರಾಂಶುಪಾಲ ಅರುಣ್ ಕುಮಾರ್ ಪಿ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಭವಾನಿ ಎ.ಜಿ ವೇದಿಕೆ ಉಪಸ್ಥಿತರಿದ್ದರು.
ಪೋಷಕರಿಗೆ ಮತ್ತು ಮಕ್ಕಳಿಗೆ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಇದೇ ಸಂದರ್ಭ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಮತ್ತು ಪುಸ್ತಕ ಹಂಚಲಾಯಿತು.
ಶ್ರೀಮತಿ ಎ.ಜಿ ಭವಾನಿಯವರು ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿ, ಶ್ರೀಮತಿ ಶಹನಾಝ್ ವಂದಿಸಿದರು. ಎಸ್ ಡಿ ಎಂ ಸಿ ಸದಸ್ಯರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.
ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹ ಶಿಕ್ಷಕರು ಸಹಕರಿಸಿದರು.
ಮಧ್ಯಾಹ್ನ ಊಟಕ್ಕೆ ಸಿಹಿ ಹಂಚಲಾಯಿತು.