ಮೇ. 31ರಂದು ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಹೊಸಂಗಡಿಯ ಸುರಕ್ಷಾದಂತ ಚಿಕಿತ್ಸಾಲಯದಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ಉಚಿತ ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರ ನಡೆಯಿತು.
ಶಿಬಿರವನ್ನು ಉದ್ಘಾಟಿಸಿದ ಮಂಜೇಶ್ವರದ ಶಾಸಕರಾದ AKM ಅಶ್ರಪ್ ರವರು ಮಾತನಾಡಿ
“ವೈದ್ಯಕೀಯ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ಪ್ರತಿಯೊಬ್ಬ ವೈದ್ಯರಿಗೂ ಸಾಮಾಜಿಕ ಹೊಣೆಗಾರಿಕೆ ಇದೆ. ಎಲ್ಲ ವೈದ್ಯರು ತಮ್ಮ ಹೊಣೆಗಾರಿಕೆ ಅರಿತು ನಿಭಾಯಿಸಿದ್ದಲ್ಲಿ ಸುಂದರ ಸಮಾಜದ ನಿರ್ಮಾಣ ಸಾಧ್ಯವಿದೆ. ಕಳೆದ 25 ವರ್ಷಗಳಿಂದ ಹೊಸಂಗಡಿಯಲ್ಲಿ ಸೇವೆ ನೀಡುತ್ತಿರುವ ಸುರಕ್ಷಾ ದಂತ ಚಿಕಿತ್ಸಾಲಯ ತಮ್ಮ ದಂತ ವೈದ್ಯಕೀಯ ಸೇವೆ ಜೊತೆಗೆ ಹಲವಾರು ಸಾಮಾಜಿಕ ಬದ್ಧತೆಯ ರಕ್ತದಾನ ಶಿಬಿರ, ಉಚಿತ ರಕ್ತದೊತ್ತಡ ಶಿಬಿರ, ಮಧುಮೇಹ ತಪಾಸಣಾ ಶಿಬಿರ, ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರ ನಡೆಸುತ್ತಾ ತನ್ನ ಸಾಮಾಜಿಕ ಕಾಳಜಿಯನ್ನು ಮೆರೆದಿದೆ.
ಈ ಹಿನ್ನಲೆಯಲ್ಲಿ ದಂತ ದಂಪತಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಮತ್ತು ಡಾ|| ರಾಜಶ್ರೀ ಮೋಹನ್ ಅವರು ಅಭಿನಂಧನೀಯರು ಎಂದರು. ಈ ಸಂದರ್ಭದಲ್ಲಿ ಶಿಬಿರದಲ್ಲಿ ಪಾಳ್ಗೊಂಡ ಎಲ್ಲರಿಗೂ ಡಾ|| ಚೂಂತಾರು ಅವರು ಬರೆದ ‘ಅರಿವು’ ಬಾಯಿ ಕ್ಯಾನ್ಸರ್ ಮಾರ್ಗದರ್ಶಿ ಪುಸ್ತಕವನ್ನು ಉಚಿತವಾಗಿ ಹಂಚಲಾಯಿತು.
ಈ ಸಂದರ್ಭದಲ್ಲಿ ಕಾಸರಗೋಡು ಜಿ.ಪಂ.ಮಾಜಿ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷದ್ ವರ್ಕಾಡಿ, ದಂತ ವೈದ್ಯರಾದ ಡಾ|| ಮುರಲೀ ಮೋಹನ್ ಚೂಂತಾರು ಮತ್ತು ಡಾ|| ರಾಜಶ್ರೀ ಮೋಹನ್, ದಂತ ಪರಿಚಾರಿಕೆಯರಾದ ರಮ್ಯ, ಚೈತ್ರ, ಸುಶ್ಮಿತಾ, ಜಯಶ್ರೀ ಮುಂತಾದವರು ಉಪಸ್ಥಿತರಿದ್ದರು. ಸುಮಾರು ೫೦ ಮಂದಿ ಈ ಶಿಬಿರದ ಪ್ರಯೋಜನ ಪಡೆದರು.