ಕೆ.ವಿ.ಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯು ಜೂ.೧ ರಂದು ಆರಂಭಗೊಂಡಿತು. ಎಲ್.ಕೆ.ಜಿಯಿಂದ ೮ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಸಂತೋಷ, ಸಂಭ್ರಮದಿಂದ ಶಾಲೆಗೆ ಆಗಮಿಸಿದರು. ಇವರನ್ನು ೯, ೧೦ನೇ ತರಗತಿಯ ವಿದ್ಯಾರ್ಥಿಗಳು, ಪ್ರಾಂಶುಪಾಲರು ಅರುಣ್ ಕುಮಾರ್, ಉಪ ಪ್ರಾಂಶುಪಾಲೆ ಶಿಲ್ಪಬಿದ್ದಪ್ಪ, ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ತುಂಬಾ ಆದರದಿಂದ ಬರಮಾಡಿಕೊಂಡರು. ಈ ಸಂದಭದಲ್ಲಿ ಮಾತನಾಡಿದ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ʻಶಾಲೆ ಎನ್ನುವ ದೇಗುಲದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಬೆಳಗುತ್ತಿರಬೇಕು. ಯಾವುದೇ ವಿದ್ಯಾರ್ಥಿಯ ಆಲಸ್ಯವನ್ನು ಮಾಡದೇ ಪ್ರತಿ ದಿನದ ಕೆಲಸವನ್ನು ಅವತ್ತೇ ಮುಗಿಸಿ ಉತ್ತಮ ಅಂಕಗಳನ್ನು ಪಡೆಯಬೇಕುʼ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ.ವಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಶಿಕ್ಷಕ, ಶಿಕ್ಷಕೇತರ ವೃಂದ ಮತ್ತು ಪೋಷಕರು ಉಪಸ್ಥಿತರಿದ್ದರು.