ಸರ್ಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಸರಕಾರಿ ಪ್ರೌಢ ಶಾಲೆ ಎಲಿಮಲೆಯ ಶಾಲಾ ಪ್ರಾರಂಭೋತ್ಸವವು ದಿನಾಂಕ ಮೇ.31ರಂದು ನಡೆಯಿತು.

ಶಾಲೆಯನ್ನು ತಳಿರು, ತೋರಣ , ರಂಗೋಲಿಗಳಿಂದ ಶೃಂಗರಿಸಿ, ಶಾಲಾ ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು. ಶಾಲಾ ಎಸ್.ಡಿ.ಎಂ.ಸಿ. ಯವರು ಮತ್ತು ಶಿಕ್ಷಕರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.
ಬಳಿಕ ಶಾಲಾ ಸಭಾಂಗಣದಲ್ಲಿ ನಡೆದ ಶಾಲಾ ಪ್ರಾರಂಭೋತ್ಸವದಲ್ಲಿ ಮಾತನಾಡಿದ ಎಸ್. ಡಿ.ಎಂ.ಸಿ. ಕಾರ್ಯಾಧ್ಯಕ್ಷರಾದ ಜಯಂತ ಹರ್ಲಡ್ಕ ಅವರು “ವಿದ್ಯಾರ್ಥಿಗಳು ಶಿಸ್ತನ್ನು ಮೈಗೂಡಿಸಿಕೊಂಡಾಗ ಮಾತ್ರ ಉತ್ತಮ ಕಲಿಕೆ ಸಾಧ್ಯ” ಎಂದು ತಿಳಿಸಿದರು.

ಈ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಕೆ. ಇವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಎಸ್. ಡಿ.ಎಂ.ಸಿ.ಸದಸ್ಯರಾದ ಧನಂಜಯ ಬಿ, ಗೋವಿಂದ ಪಿ ಪಿ, ಅಚ್ಯುತ ಎಂ, ಕೃಷ್ಣಪ್ಪ ಗೌಡ ಎಚ್, ಲೀಲಾಧರ ಬಿ ಎಂ ಹಾಗೂ ತಾಹಿರಾ ರವರು ಉಪಸ್ಥಿತರಿದ್ದರು ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶಿಕ್ಷಕರಾದ ಸುಂದರ ಕೆ. ಧನ್ಯವಾದ ಅರ್ಪಿಸಿ, ಮುರಳೀಧರ ಪುನುಕುಟ್ಟಿ ಕಾರ್ಯಕ್ರಮ ನಿರೂಪಿಸಿದರು.