2022-23 ನೇ ಸಾಲಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್, ಸುಳ್ಯ ಇಲ್ಲಿ ಉನ್ನತ ಗುಣಮಟ್ಟದ, ಮೌಲ್ಯಾಧಾರಿತ ಶಿಕ್ಷಣಕ್ಕೆ, ಪರಿಣಾಮಕಾರಿ ಬೋಧನೆಗೆ, ಅತ್ಯಾಧುನಿಕ ತಂತ್ರಜ್ಞಾನಕ್ಕೆ ಮತ್ತು ಒತ್ತಡರಹಿತ ಕಲಿಕಾ ವಾತಾವರಣಕ್ಕೆ ಆದ್ಯತೆ ನೀಡಲಾಗಿರುವುದರಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡಲು ಸಹಕಾರಿಯಾಗಿದೆ. ಉತ್ತಮ ಫಲಿತಾಂಶ ಪಡೆದ ವಿದ್ಯಾಥಿಗಳನ್ನು ಡಾ. ರೇಣುಕಾಪ್ರಸಾದ್ ಕೆ.ವಿ., ಅಧ್ಯಕ್ಷರು, ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಚಂದ್ರಶೇಖರ್ ಎ. ಮತ್ತು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಕುಸುಮಾಧರ ಎಸ್., ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಹಾಗೂ ಪ್ರಾಧ್ಯಾಪಕ ವೃಂದ ಅಭಿನ೦ದಿಸಿದ್ದಾರೆ.
೨೦೨೩-೨೪ನೇ ಸಾಲಿನ ಅಡ್ಮಿಶನ್ ಪ್ರಕ್ರಿಯೆಗಳು ನಡೆಯುತ್ತಿದ್ದು, ಇಂಜಿನಿಯರಿಂಗ್ ವಿಭಾಗಗಳಾದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ (ಆರ್‌ಟಿಫಿಶಿಯಲ್ ಇನ್‌ಟೆಲಿಜೆನ್ಸ್ & ಮೆಶಿನ್ ಲರ್ನಿಂಗ್) ಹಾಗೂ ಕಂಪ್ಯೂಟರ್ ಇಂಜಿನಿಯರಿಂಗ್ ಎಂಬ ಕೋರ್ಸ್‌ಗಳಿಗೆ ದಾಖಲಾತಿ ಪ್ರಾರಂಭಗೊಂಡಿರುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.