ಸುಳ್ಯ ನ್ಯಾಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

0

ಗಿಡ ಮರಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯ :ನ್ಯಾಯಾಧೀಶ ಬಿ ಮೋಹನ್ ಬಾಬು

ಸುಳ್ಯ ನ್ಯಾಯಾಲಯದಲ್ಲಿ ಜೂ.5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಸುಳ್ಯ ನ್ಯಾಯಾಲಯದ ಆವರಣದಲ್ಲಿ ಹಿರಿಯ ನ್ಯಾಯಾಧೀಶರು ಬಿ ಮೋಹನ್ ಬಾಬು ಹಾಗೂ ಕಿರಿಯ ನ್ಯಾಯಾಧೀಶೆ ಕು.ಅರ್ಪಿತಾರವರು ಗಿಡವನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ನ್ಯಾಯಾಲಯದ ಸಭಾಂಗಣದಲ್ಲಿ ಸುಳ್ಯ ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ ನಾರಾಯಣ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ಸುಳ್ಯ ಜೆಎಂಎಫ್ ಸಿ ಹಿರಿಯ ನ್ಯಾಯಾಧೀಶ ಮೋಹನ್ ಬಾಬು ಬಿ ರವರು ಗಿಡಕ್ಕೆ ನೀರು ಹಾಯಿಸುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ʻಪರಿಸರವನ್ನು ಉಳಿಸಿ ಬೆಳೆಸುವ ಜೊತೆಗೆ ಅದನ್ನು ಶುಚಿಯಾಗಿಟ್ಟುಕೊಳ್ಳುವುದು ನಮ್ಮ ಆದ್ಯ ಕರ್ತವ್ಯ. ಹೆಚ್ಚಾಗಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದಾಗಿ ಪರಿಸರ ನಾಶವಾಗುತ್ತಿದ್ದು ಪ್ಲಾಸ್ಟಿಕ್ ಬಳಕೆಗಳನ್ನು ಸಾಧ್ಯವಾದಷ್ಟು ಕಡಿಮೆಗೊಳಿಸಬೇಕೆಂದು ಹೇಳಿದರು. ಗಿಡ ಮರಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದ್ದು ಪರಿಸರ ಸ್ವಚ್ಛವಿದ್ದಲ್ಲಿ ಜನರ ಆರೋಗ್ಯವೂ ಕೂಡ ಉತ್ತಮವಾಗಿರುತ್ತದೆ ಎಂದು ಹೇಳಿದರು.

ನಂತರ ಮಾತನಾಡಿದ ಸುಳ್ಯ ಕಿರಿಯ ನ್ಯಾಯಾಲಯದ ನ್ಯಾಯಾಧೀಶೆ ಕು.ಅರ್ಪಿತಾ, ಸುಳ್ಯ ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ ನಾರಾಯಣ, ಸುಳ್ಯವಲಯ ಅರಣ್ಯಾಧಿಕಾರಿ ಮಂಜುನಾಥ ಎನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಪರಿಸರ ಸಂರಕ್ಷಣೆಯ ಕುರಿತು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಆರೋನ್ ಡಿ ‘ಸೋಜ, ಪ್ಯಾನಲ್ ವಕೀಲರಾದ ಕು. ಲೋಲಾಕ್ಷಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಕೀಲರ ಸಂಘದ ಪದಾಧಿಕಾರಿಗಳು ಸದಸ್ಯರು, ಅರಣ್ಯ ಇಲಾಖೆಯ ಸಿಬ್ಬಂದಿಗಳು, ನ್ಯಾಯಾಲಯದ ಸಿಬ್ಬಂದಿ ವರ್ಗದವರು, ಆರಕ್ಷಕ ಸಿಬ್ಬಂದಿಗಳುಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ಯಾನಲ್ ವಕೀಲರುಗಳಾದ ಉಷಾ ಪಿಎ ಸ್ವಾಗತಿಸಿ, ಜಗದೀಶ್ ಡಿಪಿ ವಂದಿಸಿದರು. ಹರೀಶ್ ಬೂಡು ಪನ್ನೆ ಕಾರ್ಯಕ್ರಮ ನಿರೂಪಿಸಿದರು.