ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ಸಾಧಕರಿಗೆ ಸನ್ಮಾನ

0

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜೂ.10ರಂದು ಜರಗಿತು.

ಶಾಲಾ ಅಧ್ಯಕ್ಷರಾದ ಡಾ.ಚಂದ್ರಶೇಖರ ದಾಮ್ಲೆ ಅವರು ಮಾತನಾಡಿ “ಮಕ್ಕಳ ಸಾಧನೆಗಾಗಿ ನಿರಂತರವಾಗಿ ದುಡಿಯುತ್ತಿದ್ದ ಶಿಕ್ಷಕರ ಪ್ರಯತ್ನ ಹಾಗೂ ಮಕ್ಕಳ ಪ್ರಯತ್ನವನ್ನು ಶ್ಲಾಘಿಸಿದರು. 10ನೇ ತರಗತಿಯ ಈ ಹಂತದಲ್ಲಿ ಮಕ್ಕಳು ಐಷಾರಾಮಿ ಆಕರ್ಷಣೆಗಳಿಗೆ ಒಳಗಾಗದೆ ನಿರಂತರ ಕಲಿಕೆ ಕಡೆಗೆ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.


ಮುಂದೆ ಸಾಧಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.


ನಂತರ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಇವರು ಮಾತನಾಡಿ “ಸ್ವ-ಪ್ರಯತ್ನವನ್ನು ಮಾಡಿ ಪ್ರತಿಯೊಬ್ಬರು ಕಲಿಯಬೇಕು. ಜ್ಞಾನವನ್ನು ಹುಡುಕುವ ತವಕ ಇಟ್ಟುಕೊಂಡು ಅದಕ್ಕಾಗಿ ಅವಕಾಶ ಪಡೆದುಕೊಳ್ಳುವ ವಿದ್ಯಾರ್ಥಿಗಳಾಗಬೇಕು. ಮೊಬೈಲ್, ಸಭೆ-ಸಮಾರಂಭ ಇವುಗಳಲ್ಲಿ ಹೆಚ್ಚು ಸಮಯವನ್ನು ಕಳೆಯದೆ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಪ್ರತಿ ನಿಮಿಷವನ್ನು ಸದುಪಯೋಗಪಡಿಸಿಕೊಂಡು ಪ್ರಾಮಾಣಿಕ ಪ್ರಯತ್ನ ಮಾಡಿದರೆ ಯಶಸ್ಸು ಸಿಗುವುದು” ಎಂದು ಹೇಳಿದರು.


ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಶ್ರೀಮತಿ ಶ್ರೀದೇವಿ ಪಿ.ಎಸ್. ರವರು ನಿರೂಪಿಸಿದರು. 10ನೇ ತರಗತಿಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ಪ್ರತಿಮಾಕುಮಾರಿ.ಕೆ.ಎಸ್. ಇವರು ಸ್ವಾಗತಿಸಿದರು ಹಾಗೂ ಶಾಲಾ ಶಿಕ್ಷಕಿ ಶ್ರೀಮತಿ ಅಮೃತಾ.ಕೆ. ಇವರು ಧನ್ಯವಾದ ಸಮರ್ಪಿಸಿದರು.


ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ, ಪೋಷಕರು, ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.