ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯ ಇದರ ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ. ವಿ. ಯವರು ತಮ್ಮ ತಂದೆಯವರಾದ ಡಾ. ಕುರುಂಜಿ ವೆಂಕಟ್ರಮಣ ಗೌಡರ ಹೆಸರಿನಲ್ಲಿ ಆರ್ಹ ಪ್ರತಿಭಾವಂತ ವಿದ್ಯಾರ್ಥಿಗಳ ಇಂಜಿನಿಯರಿಂಗ್ ಕಲಿಕೆಗೆ ಪ್ರತಿ ಶೈಕ್ಷಣಿಕ ವರ್ಷದಲ್ಲಿ ನಡೆಸುವ ಡಾ. ಕುರುಂಜಿ ವೆಂಕಟ್ರಮಣ ಗೌಡ ವಿದ್ಯಾರ್ಥಿ ವೇತನ ಪರೀಕ್ಷೆಗೆ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದೆ.
ವಿದ್ಯಾರ್ಥಿವೇತನ ನೀಡುವ ಸಲುವಾಗಿ ಆನ್‌ಲೈನ್ ಮುಖಾಂತರ ಜೂ. 10ರಂದು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ನಡೆಸಿದ ಈ ಪರೀಕ್ಷೆಯನ್ನು ರಾಜ್ಯದ ಹಲವು ಜಿಲ್ಲೆಗಳ ಹಾಗೂ ನೆರೆ ರಾಜ್ಯಗಳ ಒಟ್ಟು 2356 ವಿದ್ಯಾರ್ಥಿಗಳು ಬರೆದರು.
ಪರೀಕ್ಷೆ ಬರೆದ ಅರ್ಹ ವಿದ್ಯಾರ್ಥಿಗಳು ಕಾಲೇಜಿನ ವಿವಿಧ ಇಂಜಿನಿಯರಿಂಗ್ ಕೊರ್ಸುಗಳಿಗೆ ಪ್ರವೇಶ ಪಡೆಯುವ ಸಂದರ್ಭ ವಿದ್ಯಾರ್ಥಿವೇತನ ಪಡೆಯಲಿದ್ದು, ಕಾಲೇಜಿನ ಆಡಳಿತ ಮಂಡಳಿ ಈ ಉದ್ದೇಶಕ್ಕಾಗಿ ಪ್ರತಿವರ್ಷ 47.4 ಲಕ್ಷ ರೂ ವ್ಯಯಿಸಲಿದೆ. ಪರೀಕ್ಷೆಯ ಫಲಿತಾಂಶವನ್ನು ಜೂ. 20ರಂದು www.kvgceexam.com ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಮತ್ತು ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9845866528 ಸಂಪರ್ಕಿಸುವಂತೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.