ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ವಿಶಾಲವಾದ ಕೊಠಡಿಯೊಂದಿಗೆ ಸ್ಥಳಾಂತರಗೊಂಡು, ನಿರ್ಮಿಸಿದ ಪ್ಲೇ ಹೋಂನ್ನು ಜೂ.14ರಂದು ಉದ್ಘಾಟಿಸಲಾಯಿತು.
ಈ ಕಾರ್ಯಕ್ರಮಕ್ಕೆ ಆಗಮಿಸಿದ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು. ಜೆ ವಿದ್ಯಾರ್ಥಿಗಳ ಜೊತೆ ಸೇರಿ ಪ್ಲೇ ಹೋಂ ನ್ನು ಉದ್ಘಾಟಿಸಿ ದೀಪ ಬೆಳಗಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ” ಪ್ಲೇ ಹೋಂನಲ್ಲಿ ಮಕ್ಕಳಿಗೆ ಗೋಡೆಯನ್ನು ನೋಡಿ ಕಲಿತುಕೊಳ್ಳುವಂತದ್ದು ಬೇಕಾದಷ್ಟು ಇದೆ. ಮಕ್ಕಳ ಬೆಳವಣಿಗೆಗೆ ಬೇಕಾದ ಸೂಕ್ತ ವಾತಾವರಣವನ್ನು ಇಲ್ಲಿ ಕಲ್ಪಿಸಲಾಗಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ” ಎಂಬುದಾಗಿ ತಿಳಿಸಿದರು.
ಬಳಿಕ ಮಾತನಾಡಿದ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು ಜೆ ” ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಬೇಕಾದ ಎಲ್ಲಾ ಅವಕಾಶಗಳನ್ನು ಇಲ್ಲಿ ಕಲ್ಪಿಸಿಕೊಡಲಾಗಿದೆ. ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ” ಎಂಬುದಾಗಿ ತಿಳಿಸಿದರು.
ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ” ಈ ವಿಶಾಲವಾದ ಕೊಠಡಿಯೊಂದಿಗೆ, ವಿವಿಧ ಆಟಿಕೆಗಳೊಂದಿಗೆ ವಿದ್ಯಾರ್ಥಿಗಳ ಮನೋರಂಜನೆಗಾಗಿ ಸ್ಥಳಾಂತರಗೊಂಡು ನಿರ್ಮಿಸಿದ ಈ ಪ್ಲೇ ಹೋಂನ ಬೆನ್ನೆಲುಬಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ತಿಳಿಸಿ, ವಿದ್ಯಾರ್ಥಿಗಳು ಆಟದ ಜೊತೆಗೆ ಪಾಠವನ್ನು ಕಲಿಯಬೇಕು” ಎಂಬುದಾಗಿ ತಿಳಿಸಿದರು. ಬಳಿಕ ಎಲ್ಲರಿಗೂ ಸಿಹಿ ತಿಂಡಿ ವಿತರಣೆಯನ್ನು ಮಾಡಲಾಯಿತು.
ಈ ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಶ್ರೀಮತಿ ಸುಜಾತ ಕಲ್ಲಾಜೆ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅಮರ ಜ್ಯೋತಿ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ, ಉಪ ಪ್ರಾಂಶುಪಾಲ ದೀಪಕ್ ವೈ, ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ. ಸುರೇಶ್ ವಿ, ಕೆವಿಜಿ ಐಟಿಐ ಕಾಲೇಜಿನ ಪ್ರಾಂಶುಪಾಲ ಚಿದಾನಂದ ಬಾಳಿಲ, ಉಪ ಪ್ರಾಂಶುಪಾಲ ದಿನೇಶ್ ಮಡ್ತಿಲ, ಆಡಳಿತ ಮಂಡಳಿಯ ಸದಸ್ಯರಾದ ಭವಾನಿ ಶಂಕರ ಅಡ್ತಲೆ, ಮಾಧವ ಬಿ. ಟಿ, ಪ್ರಸನ್ನ ಕಲ್ಲಾಜೆ, ಅರುಣ್ ಕುರುಂಜಿ, ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.