ಅರ್ಜಿ ಸಲ್ಲಿಸಲು ಜು.10 ಕೊನೆಯ ದಿನ
2022-23 ನೇ ಸಾಲಿನಲ್ಲಿ ಮೂಲನಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ 7 ನೇ ತರಗತಿ ಮತ್ತು 10 ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ನಿಗದಿತ ನಮೂನೆಯ ಅರ್ಜಿಯನ್ನು ತಾಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಸುಳ್ಯಕಚೇರಿಯಿಂದ ಪಡೆದು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಬಗ್ಗೆ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ ಅಂಕ ಪಟ್ಟಿ, ಜಾತಿ ಪ್ರಮಾಣ ಪತ್ರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಜು.10 ರೊಳಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸುಳ್ಯ ಗಾಂಧಿ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.