ಕಳೆದ ಒಂದು ವರ್ಷದ ಮೊದಲು ಬೆಳ್ಳಾರೆಯ ಕಳಂಜದಲ್ಲಿ ದುಷ್ಕರ್ಮಿಗಳ ಗುಂಪು ಹಲ್ಲೆಯಿಂದ ಹತ್ಯೆಯಾಗಿದ್ದ ಮಸೂದ್ ಕುಟುಂಬಕ್ಕೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಜೂನ್ 16ರಂದು ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ ಕಳೆದ ವರ್ಷ ಹತ್ಯೆ ಕೀಡಾಗಿದ್ದ ನಾಲಕ್ಕು ಮೃತ ಕುಟುಂಬಗಳಿಗೆ ಸರಕಾರ ತಲಾ 25 ಲಕ್ಷ ರೂ ಘೋಷಣೆ ಮಾಡಿದೆ.
ಕಳೆದ ವರ್ಷದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು ಎಂದು ಪ್ರಕರಣಗಳು ದಾಖಲಾಗಿತ್ತು.
ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿದ ಮೇರೆಗೆ ಈ ಪರಿಹಾರ ಘೋಷಿಸಲಾಗಿದೆ ಎನ್ನಲಾಗಿದೆ. ಜೂ.19ರಂದು ಪರಿಹಾರದ ಧನದ ಚೆಕ್ ಪಡೆಯುವಂತೆ ಈ ನಾಲ್ಕು ಕುಟುಂಬಗಳಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.