ಸ್ನೇಹದಲ್ಲಿ ವಿದ್ಯಾರ್ಥಿ ಸಂಸತ್ತಿನ ಚುನಾವಣೆ

0

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿ ಸಂಸತ್ತಿನ ಚುನಾವಣೆಯು ಜೂ.15ರಂದು ನಡೆಯಿತು.


ಪ್ರಜಾಸತ್ತಾತ್ಮಕ ಮಾದರಿಯಲ್ಲಿ ನಡೆದ ಈ ಚುನಾವಣೆಯಲ್ಲಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ನಾಯಕನಾಗಿ ಪ್ರಜತ್ ಡಿ ಎಸ್ 10ನೇ, ಉಪನಾಯಕನಾಗಿ ಆದಿತ್ಯ ಎಂ. 9ನೇ ಆಯ್ಕೆಯಾದರು.


ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ನಾಯಕನಾಗಿ ಅಪ್ರಮೇಯ ಆರ್ ಯು 7ನೇ ಆಯ್ಕೆಯಾದರೆ, ಉಪನಾಯಕನಾಗಿ ವೈಷ್ಣವ್ ಪಿ. ಯನ್ 6ನೇ ತರಗತಿ ಅವಿರೋಧವಾಗಿ ಆಯ್ಕೆಯಾದರು. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಈ ಸಂದರ್ಭದಲ್ಲಿ ಉಪಸ್ಥಿತದ್ದರು. ಚುನಾವಣಾ ಅಧಿಕಾರಿಗಳಾಗಿ ಶಾಲಾ ಶಿಕ್ಷಕರು ಕರ್ತವ್ಯ ನಿರ್ವಹಿಸಿದರು.