ಕನಕಮಜಲು ಗ್ರಾ.ಪಂ. ಮೀಸಲಾತಿ ಪ್ರಕಟ

0

ಸಾಮಾನ್ಯ ಮಹಿಳೆಗೆ ಅಧ್ಯಕ್ಷ ಸ್ಥಾನ

ಸಾಮಾನ್ಯ ಸ್ಥಾನ ಉಪಾಧ್ಯಕ್ಷತೆಗೆ ಮೀಸಲು

ಕನಕಮಜಲು ಗ್ರಾಮ ಪಂಚಾಯತಿಯ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿದ್ದು, ಸಾಮಾನ್ಯ ಮಹಿಳೆಗೆ ಅಧ್ಯಕ್ಷ ಸ್ಥಾನ ಹಾಗೂ ಸಾಮಾನ್ಯ ಸ್ಥಾನ ಉಪಾಧ್ಯಕ್ಷತೆಗೆ ಮೀಸಲಾತಿ ಪ್ರಕಟಗೊಂಡಿದೆ.

ಪ್ರಸ್ತುತ ಸಾಮಾನ್ಯ ಸ್ಥಾನದಿಂದ ಆಯ್ಕೆಯಾಗಿರುವ ಶ್ರೀಧರ ಕುತ್ಯಾಳ ಅವರು ಅಧ್ಯಕ್ಷರಾಗಿ ಹಾಗೂ ಪರಿಶಿಷ್ಟ ಪಂಗಡ ಮಹಿಳಾ ಸ್ಥಾನದಿಂದ ಆಯ್ಕೆಯಾಗಿರುವ ಶ್ರೀಮತಿ ದೇವಕಿ ಕುದ್ಕುಳಿ ಅವರು ಉಪಾಧ್ಯಕ್ಷರಾಗಿದ್ದಾರೆ.


ಇದೀಗ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಬಿಜೆಪಿ ಬೆಂಬಲಿತರಾಗಿ ಆಯ್ಕೆಯಾಗಿರುವ ಶ್ರೀಮತಿ ಶಾರದಾ ಉಗ್ಗಮೂಲೆ, ಶ್ರೀಮತಿ ಪ್ರೇಮಲತಾ ಪಂಜಿಗುಂಡಿ, ಪ್ರಸ್ತುತ ಉಪಾಧ್ಯಕ್ಷರಾಗಿರುವ ಶ್ರೀಮತಿ ದೇವಕಿ ಕುದ್ಕುಳಿ, ಕಾಂಗ್ರೆಸ್ ಬೆಂಬಲಿತರಾಗಿ ಆಯ್ಕೆಯಾಗಿರುವ ಶ್ರೀಮತಿ ಸುಮಿತ್ರ ಕುತ್ಯಾಳ ಸೇರಿದಂತೆ ನಾಲ್ಕು ಮಂದಿಯೂ ಅರ್ಹರಾಗಿದ್ದು, ಬಿಜೆಪಿ ಅಧಿಕಾರದಲ್ಲಿರುವ ಕಾರಣದಿಂದ ಶ್ರೀಮತಿ ಶಾರದಾ ಉಗ್ಗಮೂಲೆ, ಶ್ರೀಮತಿ ಪ್ರೇಮಲತಾ ಪಂಜಿಗುಂಡಿ ಹಾಗೂ ಶ್ರೀಮತಿ ದೇವಕಿ ಕುದ್ಕುಳಿ ಇವರ ಮೂವರಲ್ಲಿ ಒಬ್ಬರು ಆಯ್ಕೆಯಾಗುವುದು ಖಚಿತವಾಗಿದೆ.

ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿದ್ದು, ಬಿಜೆಪಿ ಬೆಂಬಲಿತರಾಗಿ ಆಯ್ಕೆಯಾಗಿರುವ, ಪ್ರಸ್ತುತ ಅಧ್ಯಕ್ಷರಾಗಿರುವ ಶ್ರೀಧರ ಕುತ್ಯಾಳ , ಸದಸ್ಯರಾಗಿರುವ ರವಿಚಂದ್ರ ಕಾಪಿಲ , ಶ್ರೀಮತಿ ದೇವಕಿ ಕುದ್ಕುಳಿ, ಶ್ರೀಮತಿ ಶಾರದಾ ಉಗ್ಗಮೂಲೆ, ಶ್ರೀಮತಿ ಪ್ರೇಮಲತಾ ಪಂಜಿಗುಂಡಿ ಹಾಗೂ ಕಾಂಗ್ರೆಸ್ ಬೆಂಬಲಿತರಾಗಿ ಆಯ್ಕೆಯಾಗಿರುವ ಇಬ್ರಾಹಿಂ ಕಾಸಿಂ ಕಲ್ಲಡ್ಕ, ಶ್ರೀಮತಿ ಸುಮಿತ್ರ ಕುತ್ಯಾಳ ಸೇರಿದಂತೆ ಎಲ್ಲಾ ಏಳು ಮಂದಿ ಸದಸ್ಯರುಗಳೂ ಅರ್ಹರಾಗಿದ್ದು, ಬಿಜೆಪಿ ಬೆಂಬಲಿತರಾಗಿ ಆಯ್ಕೆಯಾಗಿರುವ ಶ್ರೀಧರ ಕುತ್ಯಾಳ ಹಾಗೂ ರವಿಚಂದ್ರ ಕಾಪಿಲ ಅವರಿಬ್ಬರಲ್ಲಿ ಒಬ್ಬರು ಉಪಾಧ್ಯಕ್ಷರಾಗುವುದು ಖಚಿತವಾಗಿದೆ. ಶ್ರೀಧರ ಕುತ್ಯಾಳ ಅವರು ಈ ಹಿಂದಿ‌ನ ಗ್ರಾಮ ಪಂಚಾಯತಿ ಆಡಳಿತದ ಅವಧಿಯಲ್ಲಿಯೂ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.