ಮರ್ಕಂಜ : ಮುಡ್ನೂರು ಶಾಲೆಯಲ್ಲಿ ವಿದ್ಯಾರ್ಥಿಗಳ ಯೋಗ ತರಬೇತಿ ಕಾರ್ಯಕ್ರಮ

0

ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇವರ ಸಹಭಾಗಿತ್ವದಲ್ಲಿ ಹಿರಿಯ ಪ್ರಾಥಮಿಕ ಶಾಲೆ ಮುಡ್ನೂರು – ಮರ್ಕಂಜ ಶಾಲೆಯಲ್ಲಿ ವಿದ್ಯಾರ್ಥಿಗಳ ಯೋಗ ತರಬೇತಿ ಕಾರ್ಯಕ್ರಮ ನಡೆಯಿತು.


ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಸುಳ್ಯ ಇಲ್ಲಿಯ ಅಸೋಸಿಯೇಟ್ ಪ್ರೋ, ಎನ್ ಎಸ್ ಎಸ್ ಆಫೀಸರ್ ಡಾ.ಪ್ರಮೋದ್, ಅಸಿಸ್ಟೆಂಟ್ ಪ್ರೊ. ಡಾ. ನಿತೀಶ್, ಕಿರಿಯ ವೈದ್ಯರಾದ ಡಾ.ಪೂಜ, ಡಾ.ನಮಿತಾ, ಡಾ.ಅನುಷಾ ಕಾರ್ಯಕ್ರಮ ನಡೆಸಿಕೊಟ್ಟರು.


ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ದೇವರಾಜ್ ಎಸ್.ಕೆ., ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ‌ ಮೀನಾಕ್ಷಿ ಬೊಮ್ಮೆಟ್ಟಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.