ನಿಂತಿಕಲ್ಲು ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

0

ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶೇಕಡ 100 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿದ್ದಾರೆ. ಸಂಸ್ಥೆಯಲ್ಲಿ ತರಬೇತಿಯನ್ನು ಪಡೆಯುತ್ತಿರುವ ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್ ,ಆಟೋಮೊಬೈಲ್ ,ರೆಫ್ರಿಜರೇಷನ್ ವಿಭಾಗದಲ್ಲಿ ಎರಡು ವರ್ಷಗಳ ಕಾಲ ತರಬೇತಿಯನ್ನು ಪೂರೈಸಿ ಇತ್ತೀಚೆಗೆ ನಡೆದ ವಿವಿಧ ಬಹು ರಾಷ್ಟ್ರೀಯ ಕಂಪನಿಗಳಿಗೆ ನಮ್ಮ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿ ಶೇಕಡ 100 ವಿದ್ಯಾರ್ಥಿಗಳು ಉದ್ಯೋಗವನ್ನು ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯ ಪ್ರಭಾರ ಪ್ರಾಚಾರ್ಯರಾದ ಸುಧೀರ್ ಎಮ್.ವಿ ಹಾಗೂ ಉದ್ಯೋಗ ನೇಮಕಾತಿ ಅಧಿಕಾರಿಯಾದ ಶೇಖರ್ ಕುದ್ಪಾಜೆ ಅವರು ತಿಳಿಸಿದ್ದಾರೆ. ಉದ್ಯೋಗದಲ್ಲಿ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೆ.ಎಸ್ ಎಲ್ಲಾ ವಿದ್ಯಾರ್ಥಿಗಳನ್ನು ಪ್ರಶಂಸಿದ್ದಾರೆ.

ಪ್ರಸ್ತುತ ಎಲ್ಲಾ ವಿಭಾಗಗಳಿಗೆ ವ್ಯಾಸಂಗ ಮಾಡಲು ಎಸ್ .ಎಸ್ .ಎಲ್. ಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದ್ದು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ ಎಂದು ತಿಳಿಸಿದ್ದಾರೆ.