ಸೈಂಟ್ ಜೋಸೆಫ್ ಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಗಾರ

0

ಸೈಂಟ್ ಜೋಸೆಫ್ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ಕಾರ್ಯಗಾರವನ್ನು ಜೂ.17 ರಂದು ಹಮ್ಮಿಕೊಳ್ಳಲಾಯಿತು.

ಸಭಾಧ್ಯಕ್ಷತೆಯನ್ನು ಫಾ. ವಿಕ್ಟರ್ ಡಿಸೋಜರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪ್ರೊಫೆಸರ್ ಅನಿಲ್ ಬಿ ವಿ (
ಪ್ಲೇಸ್ ಮೆಂಟ್ ಆಫೀಸರ್ ಕೆವಿಜಿ ಇಂಜಿನಿಯರಿಂಗ್ ಕಾಲೇಜ್) ಆಗಮಿಸಿ ವಿದ್ಯಾರ್ಥಿಗಳಿಗೆ ಸಮಯ ನಿರ್ವಹಣೆ ,ಪರೀಕ್ಷಾ ತಯಾರಿ ಮತ್ತು ವೃತ್ತಿ ಮಾರ್ಗದರ್ಶನದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಆಗುವಂತೆ ತಿಳಿಸಿಕೊಟ್ಟರು.

ಮುಖ್ಯೋಪಾಧ್ಯಾಯನಿ ಸಿ. ಬಿನೋಮಾ ಉಪಸ್ಥಿತರಿದ್ದರು.

ಸಹ ಶಿಕ್ಷಕಿ ಶ್ರೀಮತಿ ಚೇತನ ವಂದಿಸಿದರು. ಸಹ ಶಿಕ್ಷಕಿ ಶ್ರೀಮತಿ ಸೋಜ ಸಾಜು ನಿರೂಪಿಸಿದರು.