ವಿದ್ಯಾರ್ಥಿಗಳಿಗೆ ಕೆವಿಜಿ ವೈದ್ಯಕೀಯ ಕಾಲೇಜು ವತಿಯಿಂದ ಪುಸ್ತಕ ಕೊಡುಗೆ
ಶಾಂತಿನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಓದುವ ದಿನಾಚರಣೆಯ ಅಂಗವಾಗಿ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ವತಿಯಿಂದ ಪುಸ್ತಕ ವಿತರಣೆ ಕಾರ್ಯಕ್ರಮ ಜೂ 19ರಂದು ಶಾಂತಿನಗರ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿಕ್ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಅಧ್ಯಕ್ಷ ಡಾ.ಕೆ ವಿ ಚಿದಾನಂದ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪುಸ್ತಕಗಳನ್ನು ಓದುವ ಮಹತ್ವ,ಪುಸ್ತಕದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಬಳಿಕ ಶಾಲಾ ವಿದ್ಯಾರ್ಥಿಗಳಿಗೂ ಗ್ರಂಥಾಲಯಕ್ಕೂ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಕೆವಿಜಿ ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಶ್ರೀಮತಿ ಡಾಕ್ಟರ್ ನವ್ಯ ಹಾಗೂ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯರುಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ತುಳಸಿ ಕೆ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ದೈಹಿಕ ಶಿಕ್ಷಣ ಶಿಕ್ಷಕ ರಘುನಾಥ ಯು ವಂದಿಸಿ ಶಿಕ್ಷಕಿ ಪವಿತ್ರ ಕಾರ್ಯಕ್ರಮ ನಿರೂಪಿಸಿದರು.