ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಆಚರಿಸಲಾಯಿತು.
ಶಾಲಾ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆಯವರು ಯೋಗಾಸನಗಳ ಮಹತ್ವವನ್ನು ತಿಳಿಸುವುದರ ಜೊತೆಗೆ ಸೂರ್ಯ ನಮಸ್ಕಾರ, ಮಲಗಿ, ಕುಳಿತು ಮತ್ತು ನಿಂತು ಮಾಡುವ ವಿವಿಧ ಯೋಗಾಸನಗಳನ್ನು ಮಾಡಲು ಮಾರ್ಗದರ್ಶನ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಯವರು ಮಾತನಾಡಿ 2023ನೇ ವರ್ಷದ ಯೋಗ ದಿನದ ಧ್ಯೇಯವಾಗಿರುವ ವಸುಧೈವ ಕುಟುಂಬಕಂ ವಿಚಾರವಾಗಿ ಮಾಹಿತಿ ನೀಡಿದರು. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಯೋಗಾಸನಗಳನ್ನು ಮಾಡಿದರು. ಸೋದರ ಭಾವದಿಂದ ಎಲ್ಲರೂ ಸಹಬಾಳ್ವೆ ಮಾಡುವ ಮೂಲಕ ಸ್ನೇಹ ಸಂಬಂಧವನ್ನು ಗಟ್ಟಿ ಗೊಳಿಸುವ ನಿರ್ಧಾರ ತೆಗೆದುಕೊಂಡರು.