ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಜೋತಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು ಸುಳ್ಯದ ಈ ಸೇವಾ ಕೇಂದ್ರಗಳಲ್ಲಿ ಫಲಾನುಭವಿಗಳು ಅರ್ಜಿ ಸಲ್ಲಿಸಲು ಸಾರಥಿ ಸಾಲಿನಲ್ಲಿ ನಿಂತಿರುವುದು ಕಂಡು ಬರುತ್ತಿದೆ.
ಅರ್ಜಿ ಸಲ್ಲಿಸಲು ಫಲಾನುಭವಿಯ ಆಧಾರ್ ಕಾರ್ಡ್, ಕರೆಂಟ್ ಬಿಲ್, ತಮ್ಮ ತಮ್ಮ ಮೊಬೈಲ್ ಸಂಖ್ಯೆಯನ್ನು ನೀಡಬೇಕಾಗುತ್ತದೆ ಎಂದು ಈ ಸೇವಾ ಕೇಂದ್ರದವರು ತಿಳಿಸಿದ್ದಾರೆ. ವಿದ್ಯುತ್ ಮೀಟರ್ ನಂಬರಿಗೆ ಯಾರ ಹೆಸರನ್ನು ನೀಡಲಾಗಿದೆಯೋ ಅವರದೇ ಆಧಾರ್ ಕಾರ್ಡ್ ಬೇಕಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಸುಳ್ಯದ ಈ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.