ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಜೂನ್ 21ರಂದು ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಯೋಗ ತರಬೇತುದಾರ ಸಂತೋಷ್ ಮುಂಡಕಜೆ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿಸೋಜ ವಹಿಸಿ ಯೋಗದ ಮಹತ್ವದ ಬಗ್ಗೆ ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಮಹಮ್ಮದ್-ಹಫೀಜ್ 7ನೇ ತರಗತಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಬಗ್ಗೆ ಮಾತನಾಡಿದನು.
ಯೋಗ ತರಬೇತುದಾರ ಸಂತೋಷ್ ಮುಂಡಕಜೆ ಇವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವದ ಬಗ್ಗೆ ತಿಳಿಸುತ್ತಾ ತರಬೇತಿಯನ್ನು ನಡೆಸಿಕೊಟ್ಟರು. ಸಂಜಯ್ ಬಾಬು ಹತ್ತನೇ ಸ್ವಾಗತಿಸಿ , ವೈಷ್ಣವಿ 7ನೇ ತರಗತಿ ವಂದಿಸಿದರು. ಶೋಭಾ ಸಹ ಶಿಕ್ಷಕಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ , ಹಾಗೂ ಪುಷ್ಪವೇಣಿ ಸಹಕರಿಸಿದರು.