ಬೆಳ್ಳಾರೆ ಹಿದಾಯ ಪಬ್ಲಿಕ್ ಸ್ಕೂಲ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು ಆಚರಿಸಲಾಯಿತು.ಯೋಗ
ತರಬೇತುದಾರರಾದ ಶಿಕ್ಷಕಿ ಕು.ಹೇಮಲತಾ ಪಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಭಾಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಶ್ರೀಮತಿ ಸುನೈನಾ ಬಿ ಯವರು ವಹಿಸಿ ಯೋಗದ ಮಹತ್ವದ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.