ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗದಲ್ಲಿ ವಿಶ್ವ ಯೋಗ ದಿನಾಚರಣೆ

0

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕರಾದ ಯಶವಂತ ರೈಯವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಶಿಕ್ಷಣ ಸಂಯೋಜಕರಾದ ಶ್ರೀಮತಿ ನಳಿನಿ ಇವರು ಭಾಗವಹಿಸಿ ಯೋಗದ ಮಹತ್ವವನ್ನು ತಿಳಿಸಿದರು.

ಯೋಗ ಶಿಕ್ಷಕ ಎಂ.ಕೃಷ್ಣಭಟ್ ರವರು , ವಿದ್ಯಾರ್ಥಿ ಜೀವನಕ್ಕೆ ಪೂರಕವಾದ ಅನೇಕ ಯೋಗಾಸನವನ್ನು ವಿದ್ಯಾರ್ಥಿಗಳಿಂದ ಮಾಡಿಸಿದರು. ಸುರೇಶ್ ಸ್ವಾಗತಿಸಿ, ರಘು ಬಿಜೂರ್ ವಂದಿಸಿದರು. ಶ್ರೀಮತಿ ನಂದಾ ರವರು ಕಾರ್ಯಕ್ರಮ ನಿರೂಪಿಸಿದರು.