ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಚರಣೆ ಆಚರಿಸಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಭಾರತಿ ಪಿ ಯೋಗದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕನ್ನಡ ಅಧ್ಯಾಪಕಿ ಶ್ರೀಮತಿ ಗಾಯತ್ರಿಯವರು ಯೋಗದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು.
ದೈಹಿಕ ಶಿಕ್ಷಣ ಶಿಕ್ಷಕ ಶ್ರೀಮತಿ ಪ್ರಭಾವತಿ ಎಸ್ ವಿದ್ಯಾರ್ಥಿಗಳಿಗೆ ಯೋಗವನ್ನು ಮಾಡಿಸಿದರಲ್ಲದೆ ಅದರ ಪ್ರಯೋಜನವನ್ನು ತಿಳಿಸಿದರು. ಪ್ರೌಢಶಾಲೆಯ ಎಲ್ಲಾ ಅಧ್ಯಾಪಕ ವೃಂದದವರು ಭಾಗವಹಿಸಿದರು.