ಸುಳ್ಯ ಕೊಡಿಯಾಲಬೈಲಿನ ಎಂ.ಜಿ.ಎಂ. ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆ ಜೂ.21 ರಂದು ನಡೆಯಿತು.
ಶಾಲಾ ಸಂಚಾಲಕ ದೊಡ್ಡಣ್ಣ ಬರೆಮೇಲು ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿದರು.
ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನ ವೈದ್ಯರುಗಳಾದ (ಇಂಟೆರ್ನ್) ಡಾ. ಅನುಷಾ ಮತ್ತು ಡಾ. ನಮಿತಾ ಯೋಗದ ಮಹತ್ವ ವಿವರಿಸಿ, ಪ್ರಾತ್ಯಕ್ಷಿಕೆ ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಎಸ್, ಶಾಲಾ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಯೋಗದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಕ್ರೀಡಾ ಭಾರತಿ ಸಂಸ್ಥೆ ವತಿಯಿಂದ ನೀಡಿದ ಪದಕಗಳನ್ನು ವಿತರಿಸಲಾಯಿತು. ಶಿಕ್ಷಕಿ ಭಾವನ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಎಸ್ ವಂದಿಸಿದರು.