ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

"ನೀರು, ಆಹಾರದಂತೆ ಯೋಗ ಕೂಡ ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಬೇಕು.  ಪ್ರತಿಯೊಬ್ಬ ವಿದ್ಯಾರ್ಥಿಯು ಪ್ರತಿದಿನ ಯೋಗಾಭ್ಯಾಸವನ್ನು ಮಾಡುವುದರೊಂದಿಗೆ,  ಅವರಲ್ಲಿ ಯೋಗ ಜ್ಯೋತಿ ಬೆಳಗುವಂತಾಗಬೇಕು" ಎಂದು ರಾಷ್ಟ್ರೀಯ ಯೋಗಪಟು  ಸಂತೋಷ್ ಮುಂಡೋಕಜೆ  ತಿಳಿಸಿದರು.


 ಅವರು ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಇಂದು ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಸಾಮೂಹಿಕ  ಯೋಗಾಭ್ಯಾಸವನ್ನು ನಡೆಸುವುದರೊಂದಿಗೆ, ಯೋಗದ ಮಹತ್ವವನ್ನು ತಿಳಿಸಿಕೊಟ್ಟರು.




        ದೇವಚಳ್ಳ ಗ್ರಾಮದ ಸಮುದಾಯ ಆರೋಗ್ಯಾಧಿಕಾರಿ ಕು. ಮೋನಿಷ ಜಿ,  ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಯ ಕಾರ್ಯಧ್ಯಕ್ಷರಾದ    ಜಯಂತ ಹರ್ಲಡ್ಕ ವಹಿಸಿದ್ದರು. ಮುಖ್ಯ ಶಿಕ್ಷಕಿ ಸಂಧ್ಯಾ ಕೆ,  ದೈಹಿಕ ಶಿಕ್ಷಣ ಶಿಕ್ಷಕಿ ತಿರುಮಲೇಶ್ವರಿ ಯು ಎಸ್,  ಸಹ ಶಿಕ್ಷಕರು, ಶಾಲಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.