ಜ್ಞಾನದೀಪ ಶಾಲೆ ಎಲಿಮಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಶಿಕ್ಷಕಿ ಶ್ರೀಮತಿ ವಿದ್ಯಾ ಸರಸ್ವತಿಯವರು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಯೋಗಾಸನ ಅಭ್ಯಾಸಿಸಿದರು.
ವೇದಿಕೆಯಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಚಂದ್ರಶೇಖರ ಭಟ್ ತಳೂರು, ನಿರ್ದೇಶಕರಾದ ರಾಧಾಕೃಷ್ಣ ಶ್ರೀ ಕಟೀಲ್ ಹಾಗೂ ಮುಖ್ಯೋಪಾಧ್ಯಾಯ ಗಧಾಧರ ಬಾಳುಗೋಡು, ಶಿಕ್ಷಕ ರಕ್ಷಕ ಸಂಘದ ಕಾರ್ಯದರ್ಶಿ ಶ್ರೀಮತಿ ಭಾರತಿ ಕೇಪಳಕಜೆ, ದೈಹಿಕ ಶಿಕ್ಷಕಿ ಶ್ರೀಮತಿ ದಿವ್ಯ ಬಾಳುಗೋಡು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.