ಕೆ.ವಿ.ಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಯೋಗ ದಿನಾಚರಣೆ

0

ಕೆ.ವಿ.ಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಯೋಗ ದಿನಾಚರಣೆಯನ್ನು ಜೂನ್ 21 ರಂದು ಆಚರಿಸಲಾಯಿತು. ಯೋಗವು ಜೀವನದ ಅವಿಭಾಜ್ಯ ಅಂಗ. ಪ್ರತಿಯೊಬ್ಬರು ಜೀವನದಲ್ಲಿ ಯೋಗವನ್ನು ಮಾಡಿಕೊಂಡು ಉತ್ತಮ ಆರೋಗ್ಯವನ್ನು ಪಡೆಯಬೇಕು ಎಂದು ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಉಜ್ವಲ್ ಯು. ಜೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಗಳು ದೀಪ ಪ್ರಜ್ವಲಿಸುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಬಳಿಕ 7ನೇ ತರಗತಿ ಮಾನ್ವಿ ಮತ್ತು 6ನೇ ತರಗತಿಯ ಮುಕುಲ್ ಕಾಮತ್ ಯೋಗವು ನಮ್ಮನ್ನು ಆರೋಗ್ಯವಂತರನ್ನಾಗಿ ಮಾಡುತ್ತದೆ. ಆದುದರಿಂದ ನಾವೆಲ್ಲರೂ ಯೋಗವನ್ನು ದಿನ ನಿತ್ಯ ಮಾಡಬೇಕು ಎಂದು ಸ್ಪಷ್ಟವಾಗಿ ತಿಳಿಸಿ ಪ್ರತಿಜ್ಞಾ ವಿಧಿ ಬೋಧಿಸಿದರು.


ಶಾಲಾ ಪ್ರಾಂಶುಪಾಲರಾದ ಅರುಣ್ ಕುಮಾರ್ ಯೋಗ ಎಂದರೆ ದೈಹಿಕ ಸುಚಿತ್ವ ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ನಾವು ಪ್ರತಿ ದಿನ ಯೋಗವನ್ನು ಮಾಡಿ ಉತ್ತಮ ಆರೋಗ್ಯವನ್ನು ಕಾಪಾಡಬೇಕೆಂದು ತಿಳಿಸಿದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಯೋಗಾಸನಗಳನ್ನು ಮಾಡಿದರು. ಈ ಕಾರ್ಯಕ್ರಮವನ್ನು ಏಳನೇ ತರಗತಿಯ ಪ್ರತೀಕ್ಷಾ ನಿರೂಪಿಸಿದಳು. ಕಾಯ್ರಕ್ಮದಲ್ಲಿ ದೈಹಿಕ ಶಿಕ್ಷಕರಾದ ತೀರ್ಥವಣ್ರ ಬಳ್ಳಡ್ಕ, ಸುಪ್ರಯಾ, ಆಶಾ ಜ್ಯೋತಿ ಮತ್ತು ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.