ಸುಬ್ರಹ್ಮಣ್ಯ: ಎಸ್‌ಎಸ್‌ಪಿಯು ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ

0

ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಜೂ.21 ರಂದು ವಿಶ್ವಯೋಗ ದಿನಾಚರಣೆಯ ಕಾರ್ಯಕ್ರಮ ನಡೆಯಿತು.

೧೧೦೦ ವಿದ್ಯಾರ್ಥಿಗಳು ಏಕಕಾಲದಲ್ಲಿ ಯೋಗಾಸನ ಮಾಡಿದರು. ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಯೋಗದ ಮಹತ್ವದ ತಿಳಿಸಿದರು.


ಯೋಗ ಗುರುಗಳಾದ ಹಿರಿಯ ಸಹಶಿಕ್ಷಕ ಎಂ.ಕೃಷ್ಣ ಭಟ್, ಉಪನ್ಯಾಸಕ ಪ್ರಜ್ವಲ್.ಜೆ ಯೋಗಾಭ್ಯಾಸ ಮಾಡಿಸಿದರು. ಆರಂಭದಲ್ಲಿ ಯೋಗಾಸನ ಮಂತ್ರ, ಪತಂಜಲಿ ಸ್ಮರಣಾ ಮಂತ್ರ ಪಠಿಸಲಾಯಿತು.ಬಳಿಕ ವೃಕ್ಷಾಸನ, ಪದ್ಮಾಸನ, ಮಂತ್ರ ಸಹಿತ ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಆಸನಗಳನ್ನು ಸುಮಾರು ೧ ಗಂಟೆಗಳ ಕಾಲ ವಿದ್ಯಾರ್ಥಿಗಳು ಮಾಡಿದರು. ಅಲ್ಲದೆ ಯೋಗಾಸನವನ್ನು ದಿನಚರಿಯನ್ನಾಗಿ ಪ್ರತಿದಿನಮಾಡುವ ಪ್ರತಿಜ್ಞೆಯನ್ನು ವಿದ್ಯಾರ್ಥಿಗಳು ಸ್ವೀಕರಿಸಿದರು.
ಪ್ರೌಢಶಾಲಾ ಮುಖ್ಯಗುರು ಕೆ.ಯಶವಂತ ರೈ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಶಿಕ್ಷಕರು ಉಪಸ್ಥಿತರಿದ್ದರು.