ಸುಳ್ಯ ಜೇಸಿಐ ಸುಳ್ಯ ಪಯಸ್ವಿನಿ ಇದರ ವತಿಯಿಂದ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪುತ್ಯ, ಮಂಡೆಕೋಲು ನಲ್ಲಿ ಆಚರಿಸಲಾಯಿತು. ಘಟಕದ ಅಧ್ಯಕ್ಷ ಜೇಸಿ ನವೀನಕುಮಾರ್ ರವರ ಅಧ್ಯಕ್ಷತೆ ಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿನುತಾ ಪಾತಿಕಲ್ಲು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಯೋಗ ಶಿಕ್ಷಕಿ ಹಾಗೂ ಮಂಡೆಕೋಲು ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣಿಮರಡ್ಕ ಭಾಗವಹಿಸಿದ್ದರು. ಸಭಾವೇದಿಕೆ ಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಲಕ್ಷ್ಮೀ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶಾರದ,ಅಂಗನವಾಡಿ ಶಿಕ್ಷಕಿ ವಾರಿಜ ಪಾತಿಕಲ್ಲು ಉಪಸ್ಥಿತರಿದ್ದರು. ಜೇಸಿ ಶಶ್ಮಿ ಭಟ್ ಅಜ್ಜಾವರ ಕಾರ್ಯಕ್ರಮ ಸಂಯೋಜಕರಾಗಿ ಸಹಕರಿಸಿದ್ದರು. ಶಾಲಾ ಸಹ ಶಿಕ್ಷಕಿ ಹರ್ಷಿಣಿ ಮತ್ತು ತಮಿತಾ ರವರು ಹಾಗೂ ವಿದ್ಯಾರ್ಥಿಗಳು ಯೋಗ ತರಬೇತಿಯಲ್ಲಿ ಪಾಲ್ಗೊಂಡರು.