ನಾಲ್ಕೂರು : ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಗುತ್ತಿಗಾರು ವಲಯ, ಶೌರ್ಯ ವಿಪತ್ತು ನಿರ್ವಹಣಾ ತಂಡ ನಾಲ್ಕೂರು, ಶಾಲಾಭಿವೃದ್ಧಿ ಸಮಿತಿ ನಡುಗಲ್ಲು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ನಡೆಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿ ವಹಿಸಿದ್ದರು. ಗುತ್ತಿಗಾರು ಗ್ರಾ. ಪಂ. ಸದಸ್ಯರಾದ ವಿಜಯಕುಮಾರ್ ಚಾರ್ಮತರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಾಲ್ಕೂರು ಉಪ ವಲಯದ ಅರಣ್ಯ ಅಧಿಕಾರಿ ಸದಾಶಿವ ಸಿಂದಿಗಾರ್,
ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕಿನ ಕೃಷಿ ಮೇಲ್ವಿಚಾರಕರಾದ ರಮೇಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು, ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿರವರಾದ ಶ್ರೀಮತಿ ವನಜಾಕ್ಷಿರವರು ನಡೆಸಿಕೊಟ್ಟರು.


ಬಳಿಕ ಶಾಲಾ ಸುತ್ತಲಿನ ಪರಿಸರದಲ್ಲಿ ನಾಲ್ಕೂರು ಶೌರ್ಯ ವಿಪತ್ತು ತಂಡದ ಸದಸ್ಯರು ಹಾಗೂ ನಡುಗಲ್ಲು ಮತ್ತು ಹಾಲೇಮಜಲು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಗಿಡಗಳನ್ನು ನಾಟಿ ಮಾಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್, ನಾಲ್ಕೂರು ಅರಣ್ಯ ರಕ್ಷಕರಾದ ಅಶೋಕ್, ನಡುಗಲ್ಲು ಒಕ್ಕೂಟದ ಅಧ್ಯಕ್ಷರಾದ ಕೇಶರಾಜ, ಹಾಲೆಮಜಲು ಒಕ್ಕೂಟದ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ನಾಲ್ಕೂರು ಶೌರ್ಯ ವಿಪತ್ತು ಘಟಕದ ಪ್ರತಿನಿಧಿಯವರಾದ ಸತೀಶ್ ಬೊಂಬುಳ್ಳಿ‌ ಮತ್ತಿತರರು ಉಪಸ್ಥಿತರಿದ್ದರು.


ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಸ್ವಾಗತಿಸಿ, ಶಾಲಾ ಶಿಕ್ಷಕರಾದ ಕುಶಾಲಪ್ಪ ಗೌಡ ಧನ್ಯವಾದವಿತ್ತರು. ನಾಲ್ಕೂರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯವರಾದ ಹರಿಶ್ಚಂದ್ರ ಕುಳ್ಳಂಪ್ಪಾಡಿ ಕಾರ್ಯನಿರೂಪಿಸಿದರು.