ಆಲೆಟ್ಟಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಪೋಷಕರ ಸಭೆ ಜೂ.19ರಂದು ನಡೆಯಿತು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಧನಂಜಯ ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು. ವೇದಿಕೆಯಲ್ಲಿ ಪೋಷಕ ಸಮಿತಿ ಅಧ್ಯಕ್ಷರಾದ ಶ್ರೀಧರ ಮಾಣಿಮರ್ಧು, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಅರ್ಷಿಯ, ಸಹ ಶಿಕ್ಷಕಿಯರಾದ ಕುಮಾರಿ ಹೇಮಲತ, ಕುಮಾರಿ ಅಕ್ಷತಾ, ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಪವಿತ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಹಶಿಕ್ಷಕಿ ಕುಮಾರಿ ಹೇಮಲತಾ ಸ್ವಾಗತಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಮಕ್ಕಳ ಪೋಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.