ಸುಳ್ಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲಾ ಪೋಷಕರ ಸಭೆ ಜೂ.22 ರಂದು ನಡೆಯಿತು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ರೆ | ಫಾ | ವಿಕ್ಟರ್ ಡಿಸೋಜ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮ, ಪ್ರಾಥಮಿಕ ಶಾಲಾ ಪೋಷಕ ಸಮಿತಿಯ ಅಧ್ಯಕ್ಷ ದುರ್ಗಾಪ್ರಸಾದ್, ಪ್ರಾಥಮಿಕ ಶಾಲಾ ಶಿಕ್ಷಕ ಕಾರ್ಯದರ್ಶಿ ಶ್ರೀಮತಿ ಶೋಭಾ ಉಪಸ್ಥಿತರಿದ್ದರು. ಕಾರ್ಯಕ್ರಮವು ಐದನೇ ತರಗತಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಶಾಲಾ ಶೈಕ್ಷಣಿಕ ಚಟುವಟಿಕೆಗಳ ವರದಿಯನ್ನು ಶ್ರೀಮತಿ ಶೋಭಾ ವಾಚಿಸಿದರು.
ಮುಖ್ಯ ಶಿಕ್ಷಕಿ ಸಿ| ಬಿನೋಮ ಶಾಲಾ ನಿಯಮಗಳು ಹಾಗೂ ಪೋಷಕರಿಗೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು. ನಂತರ ತರಗತಿವಾರು ಪೋಷಕ ಪ್ರತಿನಿಧಿಗಳ ಆಯ್ಕೆ ನಡೆಯಿತು.
ನೂತನ ಪ್ರತಿನಿಧಿಗಳಿಗೆ ಸಂಚಾಲಕರು ಹೂ ನೀಡಿ ಅಭಿನಂದಿಸಿದರು.
ಕಳೆದ ಬಾರಿಯ ಪೋಷಕ ಪ್ರತಿನಿಧಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು ಹಾಗೂ ಕಳೆದ ಬಾರಿಯ ಪೋಷಕ ಅಧ್ಯಕ್ಷರಾದ ದುರ್ಗಪ್ರಸಾದ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಳೆದ ಸಾಲಿನ 5ನೇ ತರಗತಿ ಮೌಲ್ಯಂಕನ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಿಗಳಾದ ವಿದ್ಯಾರ್ಥಿಗಳನ್ನು ಬಹುಮಾನ ನೀಡಿ ಅಭಿನಂದಿಸಲಾಯಿತು.
ಸಭೆಯಲ್ಲಿ ಪೋಷಕರ ಅಭಿಪ್ರಾಯ ಸಲಹೆ ಸೂಚನೆಗಳಿಗೆ ಮುಕ್ತ ಅವಕಾಶ ನೀಡಲಾಯಿತು. ಕ್ರೀಡಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮುಂದಿನ ಯೋಜನೆಗಳ ಬಗ್ಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪರವರು ಮಾಹಿತಿ ನೀಡಿದರು.
ಸಭಾಧ್ಯಕ್ಷತೆಯನ್ನು ವಹಿಸಿದ ರೆ | ಫಾ | ವಿಕ್ಟರ್ ಡಿಸೋಜರವರು ಶುಭ ಹಾರೈಸಿ ಮಾತನಾಡಿದರು.
ಸಹಶಿಕ್ಷಕಿ ಶ್ರೀಮತಿ ವಿದ್ಯಾಶ್ರೀ ಸ್ವಾಗತಿಸಿ, ಶ್ರೀಮತಿ ಚೈತ್ರ ವಂದಿಸಿದರು. ಸಹ ಶಿಕ್ಷಕಿ ಶ್ರೀಮತಿ ಮಮತಾ ಕಾರ್ಯಕ್ರಮ ನಿರೂಪಿಸಿದರು. ಸಭೆಯ ಯಶಸ್ಸಿಗೆ ಎಲ್ಲಾ ಬೋಧಕ ಹಾಗೂ ಬೋಧಕೇತರ ವೃಂದದವರು ಸಹಕರಿಸಿದರು.