ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷತೆಗೆ ದ.ಕ. ಜಿಲ್ಲಾ ಸಂಸದರೂ ಆಗಿರುವ ನಳಿನ್ಕುಮಾರ್ ಕಟೀಲ್ ರಾಜೀನಾಮೆ ನೀಡಿರುವುದಾಗಿ ತಿಳಿದುಬಂದಿದೆ.
ಸ್ವತಃ ನಳಿನ್ಕುಮಾರ್ ಕಟೀಲ್ ಅವರೇ ಇಂದು ಬಳ್ಳಾರಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದ ಬಳಿಕ ಮಾತನಾಡಿ, ನನ್ನ ಅಧ್ಯಕ್ಷ ಅವಧಿ ಮುಕ್ತಾಯವಾಗಿದೆ. ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ನೈತಿಕವಾಗಿ ನಾನು ವಿಧಾನಸಭಾ ಚುನಾವಣೆಯ ಸೋಲಿನ ಜವಾಬ್ದಾರಿ ಹೊತ್ತಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರಿಗೆ ಜವಾಬ್ದಾರಿ ಹೊತ್ತು ರಾಜೀನಾಮೆ ಪತ್ರ ನೀಡಿದ್ದೇನೆ. ಮೌಖಿಕವಾಗಿ ರಾಷ್ಟ್ರೀಯ ಅಧ್ಯಕ್ಷರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.